ಎಸ್ತೇರಳು 5:11 - ಕನ್ನಡ ಸಮಕಾಲಿಕ ಅನುವಾದ11 ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು. ಅಧ್ಯಾಯವನ್ನು ನೋಡಿ |