Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇದಲ್ಲದೆ ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನ ಹೊರತಾಗಿ ಇನ್ನಾರನ್ನೂ ಆಹ್ವಾನಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಹಹ! ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನನ್ನು ಹೊರತಾಗಿ ಇನ್ನಾರನ್ನೂ ಕರಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಅಷ್ಟೇ ಅಲ್ಲ” ಹಾಮಾನನು ಮುಂದುವರಿಸುತ್ತಾ, “ಎಸ್ತೇರ್ ರಾಣಿಯು ಅರಸನೊಡನೆ ನನ್ನೊಬ್ಬನನ್ನೇ ಕರೆದು ಔತಣ ಮಾಡಿಸಿದಳು. ನಾಳೆಯ ಔತಣ ಸಮಾರಂಭಕ್ಕೂ ಅರಸನೊಡನೆ ನನ್ನನ್ನು ತಿರಿಗಿ ಬರಲು ಆಮಂತ್ರಿಸಿರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:12
10 ತಿಳಿವುಗಳ ಹೋಲಿಕೆ  

ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.


ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.


ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು