Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದನ್ನು ಕೇಳಿದ ಹಾಮಾನನ ಹೆಂಡತಿ ಜೆರೆಷಳೂ ಮತ್ತು ಅವನ ಮಿತ್ರವೃಂದದವರೂ ಅವನಿಗೊಂದು ಸಲಹೆಯನ್ನಿತ್ತರು. “ಒಂದು ಗಲ್ಲುಮರವನ್ನು ನೆಡಿಸು. ಅದು ಎಪ್ಪತ್ತೈದು ಅಡಿ ಎತ್ತರವಿರಲಿ. ನಾಳೆ ಮುಂಜಾನೆ ಮೊರ್ದೆಕೈಯನ್ನು ಗಲ್ಲಿಗೇರಿಸಲು ಅರಸನಿಂದ ಅಪ್ಪಣೆ ತೆಗೆದುಕೋ. ಅನಂತರ ಅರಸನೊಂದಿಗೆ ಔತಣ ಸಮಾರಂಭಕ್ಕೆ ಹೋಗಿ ಸಂತೋಷಪಡು.” ಇದನ್ನು ಕೇಳಿ ಹಾಮಾನನು ಸಂತೋಷಗೊಂಡನು. ಕೂಡಲೇ ಸೇವಕನನ್ನು ಕರೆಸಿ ಗಲ್ಲುಮರವನ್ನು ಸಿದ್ಧಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:14
22 ತಿಳಿವುಗಳ ಹೋಲಿಕೆ  

ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.


ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.


ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.


ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


“ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.


ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.


ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.


ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.


ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.


ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.


ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು