Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:9 - ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:9
19 ತಿಳಿವುಗಳ ಹೋಲಿಕೆ  

ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.


ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.


ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.


ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.


ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.


ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು