Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:11 - ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:11
9 ತಿಳಿವುಗಳ ಹೋಲಿಕೆ  

ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.


ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.


ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.


ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.


ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು