ಎಸ್ತೇರಳು 7:2 - ಕನ್ನಡ ಸಮಕಾಲಿಕ ಅನುವಾದ2 ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿ |