ಎಸ್ತೇರಳು 7:4 - ಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು. ಅಧ್ಯಾಯವನ್ನು ನೋಡಿ |
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.