ಎಸ್ತೇರಳು 7:7 - ಕನ್ನಡ ಸಮಕಾಲಿಕ ಅನುವಾದ7 ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು. ಅಧ್ಯಾಯವನ್ನು ನೋಡಿ |