Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:17 - ಕನ್ನಡ ಸಮಕಾಲಿಕ ಅನುವಾದ

17 ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಾಜನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿ ಎಲ್ಲೆಲ್ಲಿ ರಾಜಶಾಸನವು ತಲಪಿತೋ ಅಲ್ಲಲ್ಲಿ ಯೆಹೂದ್ಯರೆಲ್ಲರೂ ಆನಂದದಿಂದ ನಲಿದಾಡಿದರು. ಅದು ಅವರಿಗೆ ಅತ್ಯಂತ ಸಂತಸದ ದಿವಸವಾಗಿತ್ತು. ತಮ್ಮತಮ್ಮ ಮನೆಗಳಲ್ಲಿ ಔತಣ ಸಿದ್ಧಪಡಿಸಿದರು. ಸಾಮಾನ್ಯ ಜನರಲ್ಲಿ ಎಷ್ಟೋ ಮಂದಿ ಯೆಹೂದ್ಯ ಮತಾವಲಂಭಿಗಳಾದರು. ಯಾಕೆಂದರೆ ಅವರು ಯೆಹೂದ್ಯರಿಗೆ ತುಂಬಾ ಹೆದರಿ ಆ ರೀತಿಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:17
17 ತಿಳಿವುಗಳ ಹೋಲಿಕೆ  

ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.


ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.


ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.


ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.


ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು