Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಾನು ಹಾಮಾನನಿಂದ ತೆಗಿಸಿದ್ದ ತನ್ನ ಮುದ್ರೆಯುಂಗರವನ್ನು ಅವನಿಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಾಮಾನನಿಂದ ತಿರಿಗಿ ಪಡೆದುಕೊಂಡಿದ್ದ ತನ್ನ ಮುದ್ರೆಯುಂಗುರವನ್ನು ರಾಜನು ಮೊರ್ದೆಕೈಗೆ ಕೊಟ್ಟನು. ಎಸ್ತೇರ್ ರಾಣಿಯು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಗೆ ಕೊಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:2
11 ತಿಳಿವುಗಳ ಹೋಲಿಕೆ  

ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.


ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.


ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.


“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.


ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.


ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.


ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು