Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:3 - ಕನ್ನಡ ಸಮಕಾಲಿಕ ಅನುವಾದ

3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದುಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:3
10 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.


ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.


ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.


ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.


ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.


ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು