ಎಸ್ತೇರಳು 8:9 - ಕನ್ನಡ ಸಮಕಾಲಿಕ ಅನುವಾದ9 ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತ ಮೂರನೆಯ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ ಭಾಷೆಯಲ್ಲಿಯೂ ಲಿಖಿತವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೂಡಲೇ ರಾಜಲೇಖಕರನ್ನು ಕರೆಯಿಸಿ ಅವರಿಂದ ಮೊರ್ದೆಕೈ ಹೇಳಿದಂತೆ ರಾಜಾಜ್ಞೆಯನ್ನು ಸಾಮ್ರಾಜ್ಯದ ನಾನಾ ಭಾಷೆಗಳಲ್ಲಿ ಬರೆಯಿಸಲಾಯಿತು. ಹಿಂದೂಸ್ಥಾನದಿಂದ ಹಿಡಿದು ಇಥಿಯೋಪ್ಯದ ತನಕ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳ ಅಧಿಕಾರಿಗಳಿಗೆ, ಎಲ್ಲಾ ರಾಜ್ಯಪಾಲರಿಗೆ, ಜನನಾಯಕರಿಗೆ ಮತ್ತು ಯೆಹೂದ್ಯರಿಗೆ ಆಯಾ ಭಾಷೆಗಳ ಲಿಪಿಗಳಲ್ಲಿ ಮೂರನೇ ತಿಂಗಳಾದ ಸೀವಾನ್ ಮಾಸದ ಇಪ್ಪತ್ತಮೂರನೇ ದಿವಸದಲ್ಲಿ ಬರೆಯಿಸಲಾಯಿತು. ಅಧ್ಯಾಯವನ್ನು ನೋಡಿ |