Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:1 - ಕನ್ನಡ ಸಮಕಾಲಿಕ ಅನುವಾದ

1 ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ಸ್ವಾಧೀನ ಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನ ಆಜ್ಞಾನಿರ್ಣಯಗಳನ್ನು ನೆರವೇರಿಸತಕ್ಕ ಹನ್ನೆರಡನೆಯ ತಿಂಗಳಾದ ಪಾಲ್ಗುನಮಾಸದ ಹದಿಮೂರನೆಯ ದಿನವು ಬಂತು. ಆ ದಿವಸದಲ್ಲಿ ಯೆಹೂದ್ಯರನ್ನು ಸ್ವಾಧೀನಮಾಡಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿಕೊಂಡಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ಹಗೆಗಳನ್ನು ಸ್ವಾಧೀನ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:1
13 ತಿಳಿವುಗಳ ಹೋಲಿಕೆ  

ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.


ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.


ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.


ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು