20 ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:
20 ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.
ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.
ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.
ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.
ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ
ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.