Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:24 - ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳುಮಾಡುವುದರ ವಿಷಯವಾಗಿ ಪೂರ್ ಅಂದರೆ ಚೀಟನ್ನು ಹಾಕಿಸಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರೆಲ್ಲರ ಕಡುವೈರಿಯಾಗಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರನ್ನು ಅಂದರೆ ಚೀಟನ್ನು ಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಎಲ್ಲಾ ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡು ಅವರನ್ನು ತಳಮಳಗೊಳಿಸಿ ಹಾಳು ಮಾಡುವದರ ವಿಷಯವಾಗಿ ಪೂರನ್ನು ಅಂದರೆ ಚೀಟನ್ನು ಹಾಕಿಸಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು “ಪೂರೀಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:24
6 ತಿಳಿವುಗಳ ಹೋಲಿಕೆ  

ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.


ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.


ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.


“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.


ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು