Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:27 - ಕನ್ನಡ ಸಮಕಾಲಿಕ ಅನುವಾದ

27 ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪ್ರತಿವರುಷವೂ ಆ ಎರಡು ದಿವಸಗಳನ್ನು ಅವುಗಳ ವಿಷಯವಾದ ಶಾಸನದ ಪ್ರಕಾರ ನೇವಿುತವಾದ ಕಾಲದಲ್ಲಿ ಆಚರಿಸುವದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಕೂಡಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಗಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:27
18 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು


ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.


ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.


ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.


ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.


ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.


ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.


ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.


ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.


ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.


ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು