ಎಸ್ತೇರಳು 9:29 - ಕನ್ನಡ ಸಮಕಾಲಿಕ ಅನುವಾದ29 ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್‍ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜಮುದ್ರೆಯೊಂದಿಗೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |