ಎಸ್ತೇರಳು 9:31 - ಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದಯೆ ಹಾಗೂ ಸತ್ಯತೆಯ ಮಾತುಗಳಿಂದ ತುಂಬಿದ್ದ ಆ ಪತ್ರಗಳಲ್ಲಿ ಎಸ್ತೇರಳು, “ಯೆಹೂದ್ಯರು ತಾವೂ ತಮ್ಮ ಸಂತತಿಯವರೆಲ್ಲರೂ ಉಪವಾಸ, ಪ್ರಲಾಪದಿನಗಳನ್ನು ಪ್ರತಿವರ್ಷ ತಪ್ಪದೆ ಆಚರಿಸಬೇಕು; ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರಿಮ್ ದಿನಗಳನ್ನು ತನ್ನ ಮತ್ತು ಯೆಹೂದ್ಯನಾದ ಮೊರ್ದಕೈಯ ಆದೇಶದಂತೆ ಪ್ರತಿವರ್ಷವೂ ನಿಯಮಿತ ಕಾಲದಲ್ಲಿ ತಪ್ಪದೆ ಆಚರಿಸಬೇಕು,” ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ - ಯೆಹೂದ್ಯರು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ಉಪವಾಸಪ್ರಲಾಪ ದಿನಗಳನ್ನು ಪ್ರತಿವರುಷ ತಪ್ಪದೆ ಆಚರಿಸಬೇಕೆಂದು ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರುಷ ತಪ್ಪದೆ ನೇವಿುತವಾದ ಕಾಲದಲ್ಲಿ ಆಚರಿಸಬೇಕು ಎಂದು ಬರೆದಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು. ಅಧ್ಯಾಯವನ್ನು ನೋಡಿ |