ಎಸ್ತೇರಳು 9:4 - ಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸರ್ವಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.