ಎಸ್ತೇರಳು 9:5 - ಕನ್ನಡ ಸಮಕಾಲಿಕ ಅನುವಾದ5 ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ, ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ವೈರಿಗಳನ್ನು ಇಷ್ಟವಿದ್ದಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಯೆಹೂದ್ಯರು ತಮ್ಮ ಎಲ್ಲಾ ವೈರಿಗಳನ್ನು ಸೋಲಿಸಿ ಕತ್ತಿಯಿಂದ ಹೊಡೆದು ಕೊಂದು ನಿರ್ನಾಮಗೊಳಿಸಿದರು; ತಮ್ಮ ಹಗೆಗಳನ್ನು ಇಷ್ಟವಿದ್ದಂತೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.