ಓಬದ್ಯ 1:1 - ಕನ್ನಡ ಸಮಕಾಲಿಕ ಅನುವಾದ1 ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋವಿುನ ವಿಷಯವಾಗಿ ನುಡಿದ ವಾಕ್ಯ. ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ; ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿಕಳುಹಿಸಿದ್ದಾನೆ - ಹೊರಡಿರಿ, ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಬದ್ಯನಿಗೆ ಆದ ದೈವದರ್ಶನ. ನನ್ನ ಒಡೆಯನಾದ ಯೆಹೋವನು ಎದೋಮಿನ ಬಗ್ಗೆ ಹೀಗೆ ಹೇಳುತ್ತಾನೆ: ದೇವರಾದ ಯೆಹೋವನಿಂದ ನಾವು ಒಂದು ಸುದ್ಧಿ ಕೇಳಿದೆವು. ಒಬ್ಬ ಸಂದೇಶದೂತನು ಜನಾಂಗಗಳ ಕಡೆಗೆ ಕಳುಹಿಸಲ್ಪಟ್ಟನು. ಅವನು ಹೇಳಿದ್ದೇನೆಂದರೆ, “ಬನ್ನಿ, ನಾವು ಎದೋಮಿಗೆ ವಿರುದ್ಧವಾಗಿ ಯುದ್ಧಮಾಡೋಣ.” ಅಧ್ಯಾಯವನ್ನು ನೋಡಿ |