Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:10 - ಕನ್ನಡ ಸಮಕಾಲಿಕ ಅನುವಾದ

10 ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:10
30 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.


ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


“ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”


ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”


ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.


ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ.


ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಸಹೋದರ ಏಸಾವನು ರೋಮವುಳ್ಳವನಾಗಿದ್ದಾನೆ, ನಾನು ನುಣುಪಾದ ಚರ್ಮವುಳ್ಳವನಾಗಿದ್ದೇನೆ.


ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.


ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.


ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.


ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.


ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು