ಓಬದ್ಯ 1:11 - ಕನ್ನಡ ಸಮಕಾಲಿಕ ಅನುವಾದ11 ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಸುಮ್ಮನೆ ಎದುರುನಿಂತ ದಿನದಲ್ಲಿ, ಅಂದರೆ ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ಮ್ಲೇಚ್ಫರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇವಿುನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನೂ ಅವರಂತೆ ಇದ್ದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ. ಅಧ್ಯಾಯವನ್ನು ನೋಡಿ |