Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ತಮ್ಮನ ದುರ್ದಿನದಲ್ಲಿ, ಅವನ ಅಪಾಯ ಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು; ಯೆಹೂದ್ಯರ ನಾಶನದಿವಸದಲ್ಲಿ ಹಿಗ್ಗಬಾರದಾಗಿತ್ತು; ಅವರ ಇಕ್ಕಟ್ಟಿನ ವೇಳೆಯಲ್ಲಿ ಬಾಯಿ ಕಿಸಿಯ ಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:12
27 ತಿಳಿವುಗಳ ಹೋಲಿಕೆ  

ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.


ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.


“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?


ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.


ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.


ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.


ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.


ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.


ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.


ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ.


ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು