Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:14 - ಕನ್ನಡ ಸಮಕಾಲಿಕ ಅನುವಾದ

14 ಅವರಲ್ಲಿ ಓಡಿಹೋದವರನ್ನು ಕಡಿದುಬಿಡುವುದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು. ಕಷ್ಟದ ದಿವಸದಲ್ಲಿ ಅವರಲ್ಲಿ ಉಳಿದುಕೊಂಡವರನ್ನು ಹಿಡಿದುಕೊಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಅವರನ್ನು ಕೊಲ್ಲುವುದಕ್ಕಾಗಿ ಕೂಡುದಾರಿಗಳಲ್ಲಿ ನಿಲ್ಲಬಾರದಿತ್ತು. ತುರ್ತುಪರಿಸ್ಥಿತಿಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿನ ಕೈಗೆ ಒಪ್ಪಿಸಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಓಡಿಹೋಗುವವರನ್ನು ಕೊಲ್ಲುವದಕ್ಕೆ ದಾರಿಗಳು ಕೂಡುವ ಸ್ಥಳದಲ್ಲಿ ನಿಲ್ಲಬಾರದಾಗಿತ್ತು; ಇಕ್ಕಟ್ಟಿನ ವೇಳೆಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿಗೆ ಒಪ್ಪಿಸಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:14
10 ತಿಳಿವುಗಳ ಹೋಲಿಕೆ  

ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.


ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’


ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.


ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.


ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.


ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು