Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:15 - ಕನ್ನಡ ಸಮಕಾಲಿಕ ಅನುವಾದ

15 “ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ; ನೀನು ಮಾಡಿದ್ದೇ ನಿನಗಾಗುವದು; ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:15
28 ತಿಳಿವುಗಳ ಹೋಲಿಕೆ  

ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”


“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.


ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?


ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.


ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.


ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು