Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:16 - ಕನ್ನಡ ಸಮಕಾಲಿಕ ಅನುವಾದ

16 ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 [ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:16
13 ತಿಳಿವುಗಳ ಹೋಲಿಕೆ  

ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.


“ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.


ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು