Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು; ಆ ಪರ್ವತವು ಮೀಸಲಾಗಿರುವದು; ಯಾಕೋಬನ ವಂಶದವರು ತಮ್ಮ ಸ್ವಾಸ್ತ್ಯಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಚೀಯೋನ್ ಬೆಟ್ಟದಲ್ಲಿ ಅಳಿದುಳಿದವರು ಇರುವರು. ಅವರು ನನ್ನ ವಿಶೇಷ ಜನರಾಗಿರುವರು. ಯಾಕೋಬನ ಜನರು ತಮಗೆ ಸೇರಿರುವದನ್ನು ಹಿಂದಕ್ಕೆ ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:17
25 ತಿಳಿವುಗಳ ಹೋಲಿಕೆ  

ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.


ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು