Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:18 - ಕನ್ನಡ ಸಮಕಾಲಿಕ ಅನುವಾದ

18 ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯಾಕೋಬನ ವಂಶವು ಅಗ್ನಿ, ಯೋಸೇಫನ ವಂಶವು ಜ್ವಾಲೆ, ಏಸಾವನ ವಂಶವು ಕೂಳೆ; ಆ ಅಗ್ನಿಜ್ವಾಲೆಗಳು ಕೂಳೆಯಲ್ಲಿ ಧಗಧಗಿಸುತ್ತಾ ಅದನ್ನು ನುಂಗಿಬಿಡುವವು; ಏಸಾವನ ವಂಶದವರಲ್ಲಿ ಯಾರೂ ಉಳಿಯರು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:18
23 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.


ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.


ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,


ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.


ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


“ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.


ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.


ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.


ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”


ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು