Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:2 - ಕನ್ನಡ ಸಮಕಾಲಿಕ ಅನುವಾದ

2 “ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹಳವಾಗಿ ತಾತ್ಸಾರಕ್ಕೆ ಗುರಿಯಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎದೋಮೇ, ಇಗೋ, ರಾಷ್ಟ್ರಗಳಲ್ಲಿ ನಿನ್ನನ್ನು ಅತ್ಯಲ್ಪಳನ್ನಾಗಿ ಮಾಡುತ್ತೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಎದೋಮೇ,] ಇಗೋ, ನೀನು ಜನಾಂಗಗಳಲ್ಲಿ ಹೀನವಾಗುವಂತೆ ಮಾಡಿದ್ದೇನೆ, ಬಹು ತಾತ್ಸಾರಕ್ಕೆ ಈಡಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಎದೋಮೇ, ನಿನ್ನನ್ನು ನಾನು ಅತ್ಯಂತ ಚಿಕ್ಕದಾದ ಜನಾಂಗವನ್ನಾಗಿ ಮಾಡುವೆನು. ಎಲ್ಲರೂ ನಿನ್ನನ್ನು ಹೆಚ್ಚಾಗಿ ಹಗೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:2
9 ತಿಳಿವುಗಳ ಹೋಲಿಕೆ  

ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.


ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.


“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು