Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:4 - ಕನ್ನಡ ಸಮಕಾಲಿಕ ಅನುವಾದ

4 ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ, ನಿನ್ನ ಗೂಡು ನಕ್ಷತ್ರ ಮಂಡಲದಲ್ಲಿ ನೆಲೆಗೊಂಡಿದ್ದರೂ, ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನೀನು ಹದ್ದಿನಂತೆ ಉನ್ನತದಲ್ಲಿ ಹಾರಾಡಿದರೂ, ನಕ್ಷತ್ರಗಳಲ್ಲಿ ಗೂಡುಕಟ್ಟಿದರೂ ಸಹ ಅಲ್ಲಿಂದಲೂ ನಾನು ನಿನ್ನನ್ನು ಕೆಳಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:4
8 ತಿಳಿವುಗಳ ಹೋಲಿಕೆ  

ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!


ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು