Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 1:3 - ಕನ್ನಡ ಸಮಕಾಲಿಕ ಅನುವಾದ

3 ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 1:3
32 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”


ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”


ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು.


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.


ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.


ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’


ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.


ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.


ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.


ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನೀರಿನ ವಾಸನೆಯಿಂದ ಅದು ಮೊಳೆತು, ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.


“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.


“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


“ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. ನದಿತೀರದಲ್ಲಿರುವ ತೋಟಗಳ ಹಾಗೆಯೂ, ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.


ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.


ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.


ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.


“ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು