ಕೀರ್ತನೆಗಳು 10:14 - ಕನ್ನಡ ಸಮಕಾಲಿಕ ಅನುವಾದ14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು! ಅಧ್ಯಾಯವನ್ನು ನೋಡಿ |