ಕೀರ್ತನೆಗಳು 10:3 - ಕನ್ನಡ ಸಮಕಾಲಿಕ ಅನುವಾದ3 ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದುಷ್ಟನು ತನ್ನ ಮನೋರಥವು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಪರರ ಸೊತ್ತನ್ನು ಅಪಹರಿಸಿದವನು ಯೆಹೋವನನ್ನು ಅಲ್ಲಗಳೆದು ಬಿಟ್ಟುಬಿಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |