ಕೀರ್ತನೆಗಳು 101:3 - ಕನ್ನಡ ಸಮಕಾಲಿಕ ಅನುವಾದ3 ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ! ಅಧ್ಯಾಯವನ್ನು ನೋಡಿ |