Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 101:6 - ಕನ್ನಡ ಸಮಕಾಲಿಕ ಅನುವಾದ

6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು. ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 101:6
16 ತಿಳಿವುಗಳ ಹೋಲಿಕೆ  

ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


“ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?


ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.


ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.


ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು