Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿದ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:11
12 ತಿಳಿವುಗಳ ಹೋಲಿಕೆ  

ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.


ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.


ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು