Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:15 - ಕನ್ನಡ ಸಮಕಾಲಿಕ ಅನುವಾದ

15 ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:15
14 ತಿಳಿವುಗಳ ಹೋಲಿಕೆ  

ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ.


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.


ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.


ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು