Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂವಿುಯನ್ನು ದೃಷ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:19
10 ತಿಳಿವುಗಳ ಹೋಲಿಕೆ  

ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.


“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ!


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು