Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಅರಣ್ಯದ ಗೂಬೆಗೆ ಸಮಾನನಾಗಿದ್ದೇನೆ; ನಾನು ಹಾಳೂರಿನ ಗೂಬೆಯ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಡವಿಯ ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಡವಿಯ ರಣಹದ್ದಿಗೆ ಸಮನಾದೆ I ಹಾಳುರಿನ ಗೂಗೆಯ ಹಾಗಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಡವಿಯ ಬಕದಂತಿದ್ದೇನೆ; ಹಾಳೂರಿನ ಗೂಗೆಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:6
8 ತಿಳಿವುಗಳ ಹೋಲಿಕೆ  

ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.


ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”


ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.


ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.


ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.


ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು