Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:11 - ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:11
12 ತಿಳಿವುಗಳ ಹೋಲಿಕೆ  

ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.


ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.


ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.


ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.


ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.


“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ!


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು