Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:18 - ಕನ್ನಡ ಸಮಕಾಲಿಕ ಅನುವಾದ

18 ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನ ನಿಬಂಧನೆಗಳನ್ನು ಕೈಕೊಂಡು ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:18
19 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”


ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.


ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು