Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:20 - ಕನ್ನಡ ಸಮಕಾಲಿಕ ಅನುವಾದ

20 ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:20
14 ತಿಳಿವುಗಳ ಹೋಲಿಕೆ  

ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.


ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.


ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.


ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.


ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.


ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು