Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:9 - ಕನ್ನಡ ಸಮಕಾಲಿಕ ಅನುವಾದ

9 ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಯಾವಾಗಲೂ ತಪ್ಪುಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಯಾವಾಗಲೂ ಟೀಕಿಸುವವನಲ್ಲ. ಆತನು ನಮ್ಮ ಮೇಲೆ ನಿತ್ಯವೂ ಕೋಪವಾಗಿರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:9
7 ತಿಳಿವುಗಳ ಹೋಲಿಕೆ  

ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? ಇಗೋ, ನೀನು ಹೀಗೆ ಮಾತನಾಡಿದರೇನು? ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.”


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು