Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:12 - ಕನ್ನಡ ಸಮಕಾಲಿಕ ಅನುವಾದ

12 ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಾಡುಪಕ್ಷಿಗಳು ಬಂದು ನೀರಿನ ಹಳ್ಳಗಳ ಬಳಿಯಲ್ಲಿ ವಾಸಿಸುತ್ತವೆ. ಸಮೀಪದ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:12
7 ತಿಳಿವುಗಳ ಹೋಲಿಕೆ  

ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.


ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?


ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು