Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:16 - ಕನ್ನಡ ಸಮಕಾಲಿಕ ಅನುವಾದ

16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:16
17 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.


ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.


ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು