Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:39 - ಕನ್ನಡ ಸಮಕಾಲಿಕ ಅನುವಾದ

39 ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರಿಗೆ ಹಗಲಲ್ಲಿ ನೆರಳಿಗೋಸ್ಕರ ಮೋಡವನ್ನು, ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನು ಮೇಲೆ ಹರಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರಿಗೆ [ಹಗಲಲ್ಲಿ] ನೆರಳಿಗೋಸ್ಕರ ಮೋಡವನ್ನೂ ಇರುಳಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಮೇಲೆ ಹರವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:39
9 ತಿಳಿವುಗಳ ಹೋಲಿಕೆ  

ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.


ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.


ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು