Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:23 - ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆತನು ಅವರನ್ನು ನಾಶಮಾಡಬೇಕೆಂದಿದ್ದನು. ಆದರೆ ಆತನು ಆರಿಸಿಕೊಂಡಿದ್ದ ಮೋಶೆಯು ಮಧ್ಯಸ್ಥನಾಗಿ ಅವರನ್ನು ನಾಶಮಾಡದಂತೆ ಆತನ ಕೋಪವನ್ನು ಶಾಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:23
19 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.


ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು