Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:28 - ಕನ್ನಡ ಸಮಕಾಲಿಕ ಅನುವಾದ

28 ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:28
12 ತಿಳಿವುಗಳ ಹೋಲಿಕೆ  

“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.


ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.


ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.


ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.


“ನೀನು ಆ ದೇಶದ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಎಚ್ಚರದಿಂದಿರು. ಅವರು ಅನ್ಯದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞ ಅರ್ಪಿಸುವ ಸಮಯದಲ್ಲಿ ಒಬ್ಬನು ನಿನ್ನನ್ನು ಕರೆದಾನು, ನೀನು ಅವನ ಯಜ್ಞಭೋಜನವನ್ನು ಮಾಡಬೇಕಾದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು