Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:35 - ಕನ್ನಡ ಸಮಕಾಲಿಕ ಅನುವಾದ

35 ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅವರೊಡನೆ ಕೂಡಿಕೊಂಡು, ಅವರ ದುರಾಚಾರಗಳನ್ನು ಕಲಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರೊಡನೆ ಕೂಡಿಕೊಂಡು ಅವರ ದುರಾಚಾರಗಳನ್ನು ಕಲಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅವರು ಬೇರೆಯವರೊಂದಿಗೆ ಸೇರಿಕೊಂಡು ಅವರ ದುರಾಚಾರಗಳನ್ನೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:35
12 ತಿಳಿವುಗಳ ಹೋಲಿಕೆ  

ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.


ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.


“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು